ADVERTISEMENT

Karnataka Covid Update: 12,009 ಹೊಸ ಪ್ರಕರಣ, 50 ಸಾವು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2022, 14:25 IST
Last Updated 5 ಫೆಬ್ರುವರಿ 2022, 14:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 12,009 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಇದೇ ಅವಧಿಯಲ್ಲಿ 50 ಸೋಂಕಿತರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,09,203ರಷ್ಟಿದೆ. ಒಂದೇ ದಿನ 25,854 ಮಂದಿಚೇತರಿಸಿಕೊಂಡಿದ್ದಾರೆ.

ಕೋವಿಡ್ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 38,87‌,733ಕ್ಕೆ ಏರಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 39,300ಕ್ಕೆ ಏರಿದೆ.

ADVERTISEMENT

ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಶೇಕಡ 9.04ರಷ್ಟಿದೆ. ಮರಣ ಪ್ರಮಾಣ ಶೇಕಡ 0.41ರಷ್ಟಿದೆ.

ಬೆಂಗಳೂರು ನಗರದಲ್ಲಿ ಇಂದು 4,532 ಪ್ರಕರಣಗಳು ದಾಖಲಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ 1,028 ಪ್ರಕರಣಗಳೂ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.