ADVERTISEMENT

Karnataka Covid Update: 1,137 ಹೊಸ ಪ್ರಕರಣ, 20 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 14:34 IST
Last Updated 19 ಫೆಬ್ರುವರಿ 2022, 14:34 IST
   

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳಲ್ಲಿ 1,137 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 20 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಕೋವಿಡ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 39,35,585ಕ್ಕೆ ಏರಿದ್ದು, ಇದರಲ್ಲಿ 39,777 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 13,431 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇಕಡ 1.43ರಷ್ಟಿದೆ. ಇಂದು 3,870 ಮಂದಿಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 646 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಅಸುನೀಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.