ADVERTISEMENT

Karnataka Covid Update: 1,333 ಹೊಸ ಪ್ರಕರಣ, 19 ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 19:08 IST
Last Updated 18 ಫೆಬ್ರುವರಿ 2022, 19:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1,333 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 19 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 39,34,448ಕ್ಕೆ ಏರಿದ್ದು, ಇದರಲ್ಲಿ 39,757 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಇಂದು 4,890 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, 16,184 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.59 ರಷ್ಟಿದ್ದು, ಮರಣ ಪ್ರಮಾಣ 1.42ರಷ್ಟಿದೆ.

ಬೆಂಗಳೂರು ನಗರದಲ್ಲಿ 705 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 9 ಮಂದಿ ಇಂದು ಸಾವಿಗೀಡಾಗಿದ್ದಾರೆ.

8 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಪ್ರಕರಣ

ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ಕೋವಿಡ್‌ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆ ವರದಿಯಾಗಿವೆ.

ಬೀದರ್‌ನಲ್ಲಿ 9, ದಾವಣಗೆರೆಯಲ್ಲಿ 7, ಯಾದಗಿರಿಯಲ್ಲಿ 2, ವಿಜಯಪುರದಲ್ಲಿ 5, ಗದಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 6, ರಾಯಚೂರು ಮತ್ತು ಕೊಪ್ಪಳದಲ್ಲಿ ತಲಾ 3 ಪ್ರಕರಣಗಳು ದೃಢಪಟ್ಟಿವೆ.

ಸೋಂಕು ದೃಢ ಪ್ರಮಾಣ ಸಹ ಶೇ 1.59ಕ್ಕೆ ಇಳಿಕೆಯಾಗಿದ್ದು, 1,333 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.