ADVERTISEMENT

Karnataka Covid Update:14,950 ಹೊಸ ಪ್ರಕರಣ, 53 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 14:22 IST
Last Updated 4 ಫೆಬ್ರುವರಿ 2022, 14:22 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 14,950 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರದಲ್ಲಿ 6,039 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ದೈನಂದಿನ ಪಾಸಿಟಿವಿಟಿ ದರ ಶೇಕಡ 10.93ರಷ್ಟಿದೆ.

ರಾಜ್ಯದಲ್ಲಿ ಸದ್ಯ 1,23,098 ಸಕ್ರಿಯ ಪ್ರಕರಣಗಳಿದ್ದು, 40,599 ಮಂದಿ ಇಂದು ಚೇತರಿಸಿಕೊಂಡಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 15 ಮಂದಿ ಸೇರಿ ಇಂದು ರಾಜ್ಯದಲ್ಲಿ 53 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 1,36,777 ಮಾದರಿಗಳ ಪರೀಕ್ಷೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.