ಬೆಂಗಳೂರು: ರಾಜ್ಯದಲ್ಲಿ ವರ್ಷಾಂತ್ಯದ ದಿನವಾದ ಶುಕ್ರವಾರ 832 ಕೋವಿಡ್ ದೃಢ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರವೊಂದರಲ್ಲೇ 656 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಬೆಂಗಳೂರು ನಗರದಲ್ಲಿ ಇಂದು 8 ಮಂದಿ ಕೋವಿಡ್ ಕಾರಣಕ್ಕೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,712ಕ್ಕೆ ಏರಿಕೆಯಾಗಿದೆ. 335 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 29,60,261 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 38,335ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ 35, ದಕ್ಷಿಣ ಕನ್ನಡದಲ್ಲಿ 30, ಕೊಡಗುವಿನಲ್ಲಿ 21, ಬೆಳಗಾವಿಯಲ್ಲಿ 12, ಹಾಸನದಲ್ಲಿ 11 ಮಂದಿಗೆ ಕೋವಿಡ್ ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ದಕ್ಷಿಣ ಕನ್ನಡ. ಉತ್ತರ ಕನ್ನಡ ಮತ್ತು ಮಂಡ್ಯದಲ್ಲಿ ತಲಾ 1 ಸಾವು ಕೋವಿಡ್‌ನಿಂದ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.