ADVERTISEMENT

Karnataka Covid Updates: ರಾಜ್ಯದಲ್ಲಿಂದು 566 ಮಂದಿಗೆ ಸೋಂಕು, 6 ಸಾವು

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 14:09 IST
Last Updated 29 ಡಿಸೆಂಬರ್ 2021, 14:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿಂದು 566 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಕೊರೊನಾ ಕಾರಣದಿಂದ 6 ಮಂದಿ ಮೃತಪಟ್ಟಿದ್ದಾರೆ. 245 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 7,771 ಇದೆ.

ಬುಧವಾರ ಬೆಂಗಳೂರು ನಗರದಲ್ಲಿ 400 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 33, ಹಾಸನದಲ್ಲಿ 31, ಉಡುಪಿಯಲ್ಲಿ 17, ಕೊಡಗು ಮತ್ತು ಕೋಲಾರದಲ್ಲಿ ತಲಾ 14 ಕೋವಿಡ್‌ ದೃಢ ಪ್ರಕರಣಗಳು ವರದಿಯಾಗಿವೆ. ಉಳಿದ ಯಾವ ಜಿಲ್ಲೆಗಳಲ್ಲೂ 10ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿಲ್ಲ. ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಕೊರೊನಾದಿಂದ ತಲಾ ಒಂದು ಸಾವು ಸಂಭವಿಸಿದೆ.

ಇದುವರೆಗೆ ಒಟ್ಟು 30,05,798 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ 29,59,674 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೊರೊನಾ ಸೋಂಕಿನಿಂದ 38,324 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.