
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 676 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
804 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,892ರಷ್ಟಾಗಿದೆ.
ಇಂದು 9,400 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 7.19ರಷ್ಟಿದೆ.
ಬೆಂಗಳೂರು ನಗರದಲ್ಲಿ 626, ಮೈಸೂರಿನಲ್ಲಿ 12, ಉತ್ತರ ಕನ್ನಡ 8, ಉಡುಪಿ ಮತ್ತು ಬಳ್ಳಾರಿಯಲ್ಲಿ ತಲಾ 8, ದಕ್ಷಿಣ ಕನ್ನಡ 4, ಬೆಳಗಾವಿ 3, ಮಂಡ್ಯ, ಶಿವಮೊಗ್ಗ, ಕಲಬುರಗಿ, ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 2 ಪ್ರಕರಣ ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.