ADVERTISEMENT

Karnataka Covid Updates: ಹೊಸದಾಗಿ 1,108 ಪ್ರಕರಣಗಳು ದೃಢ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 16:19 IST
Last Updated 18 ಜುಲೈ 2022, 16:19 IST
   

ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 1,108 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 997 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,680ಕ್ಕೆ ಜಿಗಿದಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 6.82ರಷ್ಟಿದ್ದು, ವಾರದ ಕೋವಿಡ್ ದೃಢ ಪ್ರಮಾಣ ಶೇಕಡ 4.61ರಷ್ಟಿದೆ.

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 993 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ, ಮೈಸೂರಿನಲ್ಲಿ 25, ದಕ್ಷಿಣ ಕನ್ನಡದಲ್ಲಿ 15 ಮತ್ತು ಕೋಲಾರದಲ್ಲಿ 12 ಪ್ರಕರಣಗಳು ದೃಢಪಟ್ಟಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.