ADVERTISEMENT

Karnataka Covid Updates: ಹೊಸದಾಗಿ 1,694 ಪ್ರಕರಣಗಳು ದೃಢ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 14:25 IST
Last Updated 6 ಆಗಸ್ಟ್ 2022, 14:25 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,694 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 1,741 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 28,118 ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 11,355ರಷ್ಟಾಗಿದ್ದು, ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 6.02ರಷ್ಟಾಗಿದೆ.

ADVERTISEMENT

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 1,105, ಧಾರವಾಡ 98, ಬೆಳಗಾವಿ 80, ಮೈಸೂರಿನಲ್ಲಿ 48, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ತಲಾ 34 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.