ADVERTISEMENT

Karnataka Covid Updates: ಹೊಸದಾಗಿ 1,121 ಪ್ರಕರಣಗಳು ದೃಢ, 5 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 14:32 IST
Last Updated 16 ಆಗಸ್ಟ್ 2022, 14:32 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,121 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇಂದು 1,711 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,880 ರಷ್ಟಾಗಿದೆ.

ಈವರೆಗೆ, ರಾಜ್ಯದಲ್ಲಿ 40,152 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ADVERTISEMENT

ದಿನದ ಕೋವಿಡ್ ಪಾಸಿಟಿವಿಟಿ ದರ ಶೇಕಡ 7.59ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 6.76 ರಷ್ಟಿದೆ.

ಬೆಂಗಳೂರು ನಗರದಲ್ಲಿ ಎಂದಿನಂತೆ ಅತಿ ಹೆಚ್ಚು 812 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ, ಬಳ್ಳಾರಿ ಮತ್ತು ಮೈಸೂರು ಜಿಲ್ಲೆಗಳಲ್ಲಿತಲಾ 33 ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.