ADVERTISEMENT

Karnataka Covid Updates: ಹೊಸದಾಗಿ 2,329 ಪ್ರಕರಣಗಳು ದೃಢ, 4 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 16:57 IST
Last Updated 18 ಆಗಸ್ಟ್ 2022, 16:57 IST
   

ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 2,329 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 1,782 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,307ಕ್ಕೆ ಏರಿದೆ.

ಕೋವಿಡ್‌ನಿಂದ ಈವರೆಗೆ 40,159 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ದಿನದ ಕೋವಿಡ್ ಪಾಸಿಟಿವಿಟಿದರ ಶೇಕಡ 7.78ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 6.61 ರಷ್ಟಾಗಿದೆ.

ಬೆಂಗಳೂರು ನಗರದಲ್ಲಿ ಎಂದಿನಂತೆ ಅತಿ ಹೆಚ್ಚು1,606 ಪ್ರಕರಣಗಳು ವರದಿಯಾಗಿವೆ. ಮೈಸೂರು ಜಿಲ್ಲೆಯಲ್ಲಿ 168, ಧಾರವಾಡ 48, ಹಾಸನದಲ್ಲಿ 47 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.