ADVERTISEMENT

Karnataka Covid Updates: ಹೊಸ ಪ್ರಕರಣಗಳ ಸಂಖ್ಯೆ ಏರಿಕೆ, ಬೆಂಗಳೂರಲ್ಲೇ ಹೆಚ್ಚು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 16:11 IST
Last Updated 26 ಏಪ್ರಿಲ್ 2022, 16:11 IST
   

ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 85 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,686ಕ್ಕೆ ಏರಿದ್ದು,70 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.24 ಗಂಟೆಗಳಲ್ಲಿ 7,171 ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರು ನಗರದಲ್ಲಿ 82 ಪ್ರಕರಣ, ವಿಜಯಪುರದಲ್ಲಿ 1 ಮತ್ತು ತುಮಕೂರಿನಲ್ಲಿ 2 ಪ್ರಕರಣ ದಾಖಲಾಗಿವೆ.

ADVERTISEMENT

ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.18ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 1.04ರಷ್ಟಿದೆ.

ನಿನ್ನೆ ರಾಜ್ಯದಲ್ಲಿ 64 ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.