ADVERTISEMENT

ಲಸಿಕೆ ವಿತರಣೆಯಲ್ಲಿ ರಷ್ಯಾ, ಫ್ರಾನ್ಸ್, ಕೆನಡಾ ಹಿಂದಿಕ್ಕಿದ ಕರ್ನಾಟಕ: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2021, 6:04 IST
Last Updated 12 ಸೆಪ್ಟೆಂಬರ್ 2021, 6:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌ ಲಸಿಕೆ ವಿತರಣೆಯಲ್ಲಿ ಕರ್ನಾಟಕವು ರಷ್ಯಾ, ಫ್ರಾನ್ಸ್‌ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ ಎಂದು ಬಿಜೆಪಿ ಹೇಳಿದೆ.

ಲಸಿಕೆ ಅಭಿಯಾನ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ಲಸಿಕಾ ಅಭಿಯಾನ ವೇಗಕಂಡುಕೊಳ್ಳುತ್ತಿದ್ದು, ವಿದೇಶಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯದ ಸಾಧನೆ ಅದ್ವಿತೀಯವಾಗಿದೆ. ರಾಜ್ಯದಲ್ಲಿ ನಿತ್ಯ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದು, ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ’ ಎಂದು ಹೇಳಿದೆ.

ಇದನ್ನೂ ಓದಿ... Covid-19 India Update: 28,591 ಹೊಸ ಪ್ರಕರಣ ದೃಢ, 338 ಮಂದಿ ಸಾವು

ದೇಶದಾದ್ಯಂತ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 338 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈವರೆಗೆ 73,82,07,378 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ.

ADVERTISEMENT

ರಾಜ್ಯದಲ್ಲಿ ಶನಿವಾರ 801 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.