ADVERTISEMENT

Covid-19 Karnataka update: 24 ಗಂಟೆಗಳಲ್ಲಿ 8,161 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 14:17 IST
Last Updated 25 ಆಗಸ್ಟ್ 2020, 14:17 IST
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 8,161 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 6,814 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ 82,410 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,91,826 ತಲುಪಿದೆ. ಈ ಪೈಕಿ 2,04,439 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 148 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಈವರೆಗೂ 4,958 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 2,294 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 61 ಮಂದಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 1,538 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ 35,430 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬಳ್ಳಾರಿಯಲ್ಲಿ 551 ಪ್ರಕರಣಗಳು ವರದಿಯಾಗಿದ್ದು, 1,004 ಮಂದಿ ಗುಣಮುಖ ಹಾಗೂ 6 ಜನ ಸಾವಿಗೀಡಾಗಿದ್ದಾರೆ. ದಾವಣೆಗೆರೆಯಲ್ಲಿ 318 ಪ್ರಕರಣಗಳು,600 ಜನ ಗುಣಮುಖ ಹಾಗೂ ಐವರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 1,331 ಪ್ರಕರಣಗಳು (4 ದಿನಗಳ ಬ್ಯಾಕ್‌ಲಾಗ್‌ ಪ್ರಕರಣಗಳು ಸೇರಿ) ಹಾಗೂ 469 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ 16 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.