ADVERTISEMENT

Karnataka Covid-19 Update: ರಾಜ್ಯದಲ್ಲಿ 1,196 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 16:58 IST
Last Updated 13 ಡಿಸೆಂಬರ್ 2020, 16:58 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,196 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ.

ಭಾನುವಾರ 2,036 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 9,01,410 ತಲುಪಿದ್ದು, ಈ ಪೈಕಿ 8,72,038 ಮಂದಿ ಗುಣಮುಖರಾಗಿದ್ದಾರೆ ಹಾಗೂ 11,944 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 17,409 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 260 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 672 ಹೊಸ ಪ್ರಕರಣಗಳು, ಮೈಸೂರಿನಲ್ಲಿ 42, ಬಳ್ಳಾರಿಯಲ್ಲಿ 36, ಚಿಕ್ಕಬಳ್ಳಾಪುರದಲ್ಲಿ 55, ದಕ್ಷಿಣ ಕನ್ನಡದಲ್ಲಿ 36, ಚಿತ್ರದುರ್ಗದಲ್ಲಿ ಕೋವಿಡ್‌ ದೃಢಪಟ್ಟ 33 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.