ADVERTISEMENT

ಕರ್ನಾಟಕದಲ್ಲಿ 5 ಕೋಟಿ 2ನೇ ಡೋಸ್ ಕೋವಿಡ್ ಲಸಿಕೆ ವಿತರಣೆ: ಸುಧಾಕರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಏಪ್ರಿಲ್ 2022, 11:02 IST
Last Updated 25 ಏಪ್ರಿಲ್ 2022, 11:02 IST
   

ಬೆಂಗಳೂರು: ಕೋವಿಡ್ 4ನೇ ಅಲೆಯ ಆತಂಕದ ನಡುವೆ ರಾಜ್ಯದಲ್ಲಿ 5 ಕೋಟಿ 2ನೇ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

5,01,76,111 ಎರಡನೇ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಇನ್ನು, 5.39 ಕೋಟಿ ಮೊದಲ ಡೋಸ್ ವಿತರಣೆ ಮಾಡಲಾಗಿದ್ದು, 16 ಲಕ್ಷಕ್ಕೂ ಅಧಿಕ ಮುಂಜಾಗ್ರತಾ ಡೋಸ್ ವಿತರಿಸಲಾಗಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತದ ಅಸಾಧಾರಣ ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಜನರಲ್ಲಿ ಲಸಿಕೆ ಬಗೆಗಿನ ತಪ್ಪು ಕಲ್ಪನೆ ಹೋಗಲಾಡಿಸಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮಾಧ್ಯಮಗಳಿಗೆ ಧನ್ಯವಾದ ಎಂದು ಸುಧಾಕರ್ ಹೇಳಿದ್ದಾರೆ.

ADVERTISEMENT

ನಿನ್ನೆ ರಾಜ್ಯದಲ್ಲಿ 60 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 57 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದ್ದವು. ಸಕ್ರಿಯ ಪ್ರಕರಣಗಳ ಸಂಖ್ಯೆ 1676ಕ್ಕೆ ಜಿಗಿದಿದೆ.

ಇನ್ನು, ದೇಶದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯೂ ಏರುಗತಿಯಲ್ಲಿದ್ದು, ಕಳೆದ 24 ಗಂಟೆಗಳಲ್ಲಿ 2,541 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,522 ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.