ADVERTISEMENT

ಶಿವಮೊಗ್ಗ ಗಲಾಟೆ | 27 ಎಫ್‌ಐಆರ್‌, 64 ಮಂದಿ ಬಂಧನ: ಅಲೋಕ್‌ ಮೋಹನ್‌

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2023, 14:35 IST
Last Updated 4 ಅಕ್ಟೋಬರ್ 2023, 14:35 IST
<div class="paragraphs"><p>ಅಲೋಕ್‌ ಮೋಹನ್‌</p></div>

ಅಲೋಕ್‌ ಮೋಹನ್‌

   

ಬೆಂಗಳೂರು: ‘ಶಿವಮೊಗ್ಗದಲ್ಲಿ ನಡೆದಿದ್ದ ಗಲಾಟೆ ಸಂಬಂಧ ಇದುವರೆಗೂ ಒಟ್ಟು 27 ಪ್ರಕರಣ ದಾಖಲಿಸಿಕೊಂಡು 64 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್‌ ಹೇಳಿದರು.

‘ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಸ್ಥಳೀಯ ಪೊಲೀಸರು ಭದ್ರತೆ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಶಿವಮೊಗ್ಗ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಬೇರೆಲ್ಲೂ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.