ಮೈಸೂರು: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಅಡಗೂರು ಎಚ್.ವಿಶ್ವನಾಥ್, ಬರೋಬ್ಬರಿ ಒಂದು ತಿಂಗಳ ಬಳಿಕ ತವರು ಜಿಲ್ಲೆ ಮೈಸೂರಿಗೆ ವಾಪಸ್ ಆಗಿದ್ದಾರೆ.
ಪುತ್ರನ ಮನೆಯಲ್ಲಿ ಶನಿವಾರ ವಿಶ್ರಾಂತಿ ಪಡೆದ ಅವರು, ನಂತರ ಬಿಜೆಪಿ ಮುಖಂಡ ಕೌಟಿಲ್ಯ ರಘು ಜೊತೆ ಕಾರಿನಲ್ಲಿ ತೆರಳಿದರು.
ಭಾನುವಾರ ಬೆಳಿಗ್ಗೆ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ
ಪ್ರಕಟಿಸಲಿದ್ದಾರೆ. ಬಳಿಕ ಹುಣಸೂರು ಕ್ಷೇತ್ರಕ್ಕೆ ತೆರಳಿ ಮತದಾರರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.