ಬೆಂಗಳೂರು:ಡ್ರಗ್ಸ್ ಜಾಲದ ತನಿಖೆಯಲ್ಲಿ ಸಿಕ್ಕ ಮಾಹಿತಿ ಆಧರಿಸಿ ನಗರದ ಸಿಸಿಬಿ ಪೊಲೀಸರು, 5 ಪಬ್ಗಳ ಮೇಲೆ ಶನಿವಾರ ರಾತ್ರಿ ದಾಳಿ ಮಾಡಿದರು.
ಪ್ರಕರಣದಡಿ ಬಂಧಿಸಲಾಗಿರುವ ನಟಿಯರು ಹಾಗೂ ಇತರೆ ಆರೋಪಿಗಳ ವಿಚಾರಣೆ ನಡೆಸಲಾಗಿತ್ತು. ಕೆಲ ಪಬ್ಗಳಲ್ಲೂ ಡ್ರಗ್ಸ್ ಪೂರೈಕೆಯಾಗುತ್ತಿದ್ದ ಮಾಹಿತಿ ಆರೋಪಿಗಳಿಂದ ಸಿಸಿಬಿಗೆ ಸಿಕ್ಕಿತ್ತು.
'ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು 5 ಪಬ್ಗಳ ಮೇಲೆ ದಾಳಿ ಮಾಡಲಾಗಿದೆ. ರಾತ್ರಿಯಿಡಿ ಶೋಧ ನಡೆಸಲಾಗಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.