ADVERTISEMENT

Karnataka Election 2023 | ಮದ್ಯ ನಿಷೇಧ: ಕೆಆರ್‌ಎಸ್‌ ಭರವಸೆ

‘ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ’ ಸಮಾರೋಪ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 23:35 IST
Last Updated 3 ಮಾರ್ಚ್ 2023, 23:35 IST
ತುಮಕೂರಿನಲ್ಲಿ ಶುಕ್ರವಾರ ಕೆಆರ್‌ಎಸ್‌ ಪಕ್ಷದಿಂದ ಹಮ್ಮಿಕೊಂಡಿದ್ದ ‘ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ’ಯ ಸಮಾರೋಪ ಸಮಾರಂಭವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು
ತುಮಕೂರಿನಲ್ಲಿ ಶುಕ್ರವಾರ ಕೆಆರ್‌ಎಸ್‌ ಪಕ್ಷದಿಂದ ಹಮ್ಮಿಕೊಂಡಿದ್ದ ‘ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ’ಯ ಸಮಾರೋಪ ಸಮಾರಂಭವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು   

ತುಮಕೂರು: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧಿಸಲಾಗುವುದು. ಪೊಲೀಸರು, ಸರ್ಕಾರಿ ನೌಕರರು ನೆಮ್ಮದಿಯಿಂದ ಕೆಲಸ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಇಲ್ಲಿ ಶುಕ್ರವಾರ ಪ್ರಕಟಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಹಮ್ಮಿಕೊಂಡಿರುವ ‘ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ’ಯ ಸಮಾರೋಪವು ನಗರದಲ್ಲಿ ನಡೆಯಿತು. ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಮೂರು ಬಿಟ್ಟವರು ನಮ್ಮ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಕೆಆರ್‌ಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧು ಸ್ವಾಮಿ, ‘ನಾಡಿನ ಜನರು ಅನೇಕ ಸಮಸ್ಯೆಗಳನ್ನು
ಎದುರಿಸುತ್ತಿದ್ದಾರೆ. ನಾಗರಿಕತೆ ಬೆಳೆಯುತ್ತಾ ಉಳ್ಳವರು ಸುಳ್ಳು, ಮೋಸಗಳನ್ನು ಕಲಿತಿದ್ದಾರೆ. ಭ್ರಷ್ಟ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಲೂಟಿ ಮಾಡುತ್ತಿವೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡಿ, ಸರ್ಕಾರಿ ಕಚೇರಿಗಳನ್ನು ಲಂಚ ಮುಕ್ತ ಮತ್ತು ಪಾರದರ್ಶಕವಾಗಿ ನಡೆಸುತ್ತೇವೆ’ ಎಂದು ತಿಳಿಸಿದರು.

ADVERTISEMENT

ಕೆಆರ್‌ಎಸ್‌ ಉಪಾಧ್ಯಕ್ಷ ಲಿಂಗೇಗೌಡ, ‘ಜೆಸಿಬಿ ಪಕ್ಷಗಳು ರಾಜ್ಯವನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿವೆ. ಪ್ರತಿನಿತ್ಯವೂ ಹಣ, ಹೆಂಡ, ಸೀರೆ ಹಂಚುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.