ಹಾಸನ: ‘ಜಿಲ್ಲೆಯಲ್ಲಿ 25 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಜಿಲ್ಲೆ ಏನು ಎಂಬುದು ನನಗೆ ಗೊತ್ತಿದೆ. ನಮ್ಮ ಮುಖಂಡರ ಜೊತೆಗೆ ಕುಳಿತು ಮಾತನಾಡುತ್ತೇನೆ. ಇದರಲ್ಲಿ ಯಾವುದೇ ದಾಕ್ಷಿಣ್ಯ ಇಲ್ಲ. ಹೆದರಿಕೊಂಡು ಓಡಿ ಹೋಗಲ್ಲ. ಜಿಲ್ಲೆಯಲ್ಲಿ ಈ ಬಾರಿ ನನಗೆ ಅಗ್ನಿಪರೀಕ್ಷೆ ನಡೆಯಲಿದೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ರೇವಣ್ಣ ಜಿಲ್ಲೆಗೆ ದುಡಿದಿದ್ದಾನೆ ಎಂದರೆ ಜಿಲ್ಲೆಯ ಜನ ನನ್ನ ಕೈಹಿಡಿಯಲಿ. ಇಲ್ಲವೆಂದರೆ, ಅವರೇ ತೀರ್ಮಾನಿಸಲಿ. ಕಾರ್ಯಕರ್ತರೆಲ್ಲ ಒಟ್ಟಾಗಿದ್ದೇವೆ. ಹಾಸನದಲ್ಲಿ ಸಮರ್ಥ ನಾಯಕರಿಲ್ಲ ಎಂದು ತಿಳಿದುಕೊಳ್ಳಬೇಡಿ’ ಎಂದರು.
ಹಾಸನ ಟಿಕೆಟ್ ಆಕಾಂಕ್ಷಿ ಎಚ್.ಪಿ. ಸ್ವರೂಪ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕುರಿತಂತೆ, ‘ಅವರು ಯಾರೆಂದು ಗೊತ್ತಿಲ್ಲ. ಹಾಸನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ
ನನ್ನು ನಿಲ್ಲಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಸಾಮಾನ್ಯ ಕಾರ್ಯಕರ್ತ ಯಾರು ಎಂದು ನೋಡೋಣ’ ಎಂದಷ್ಟೇ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.