ADVERTISEMENT

ಕೋಮು ಪ್ರಚೋದನೆಗೆ ಬುನಾದಿ ಹಾಕಿದ್ದೇ ಸಿದ್ದರಾಮಯ್ಯ: ಶೋಭಾ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 21:46 IST
Last Updated 22 ಫೆಬ್ರುವರಿ 2023, 21:46 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಕೊಪ್ಪಳ: ‘ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿ ರಾಜ್ಯದಲ್ಲಿ ಕೋಮುಗಲಭೆ ಪ್ರಚೋದನೆಗೆ ಬುನಾದಿ ಹಾಕಿದರು. ಮುಸ್ಲಿಂ ‌ಸಮುದಾಯದಲ್ಲಿ ವ್ಯಕ್ತಿ ಪೂಜೆ ಇರದಿದ್ದರೂ ಮತ ಬ್ಯಾಂಕ್ ರಾಜಕಾರಣಕ್ಕೆ ಮುಂದಾದರು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

‘ಸಿದ್ದರಾಮಯ್ಯ ವೀರಶೈವ ಲಿಂಗಾಯತರನ್ನು ಒಡೆಯಲು ಯತ್ನಿಸಿದರು. ಶಾಲಾ ಮಕ್ಕಳಲ್ಲಿ ಜಾತಿಯ ವಿಷಬೀಜ ಬಿತ್ತಿದರು. ಒಂದು ವರ್ಗಕ್ಕೆ ಮಾತ್ರ ಶಾದಿ ಭಾಗ್ಯ ಕೊಟ್ಟರು. ಸಿದ್ದರಾಮಯ್ಯ ಸಮುದಾಯದವರಲ್ಲಿ ಬಡವರು ಇಲ್ಲವಾ? ಬಂಧಿತರಾಗಿದ್ದ ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿಸಿದರು. ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದರು’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಆಯಾ ಪಕ್ಷಗಳ ತತ್ವ, ಸಿದ್ಧಾಂತಕ್ಕೆ ತಕ್ಕಂತೆ ಮಾತನಾಡಬೇಕು. ಕೊಲ್ಲುವ ಬಗ್ಗೆ ಮಾತಾಡಬಾರದು. ಟಿಪ್ಪುಗೆ ಹೊಡೆದಂತೆ ಸಿದ್ದರಾಮಯ್ಯಗೆ ಹೊಡೆಯಬೇಕು ಎಂದು ಸಚಿವ ಆಶ್ವತ್ಥನಾರಾಯಣ ಹೇಳಿದ್ದು ತಪ್ಪು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.