ADVERTISEMENT

ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ, ಎಂಜಿನಿಯರಿಂಗ್ ಕಾಲೇಜು ಆರಂಭ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 8:21 IST
Last Updated 23 ಅಕ್ಟೋಬರ್ 2020, 8:21 IST
ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ
ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ   

ಬೆಂಗಳೂರು: ನವೆಂಬರ್ 17ರಿಂದ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಪುನರಾರಂಭಗೊಳ್ಳಲಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಇರಲಿದೆ. ಪ್ರತಿ ಕಾಲೇಜುಗಳಲ್ಲೂ ನಿರ್ವಹಣೆಗೆ ಕಾರ್ಯಪಡೆ ಇರುತ್ತದೆ. ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳೂ ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT