ADVERTISEMENT

ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಪ್ರಕಟ

​ಪ್ರಜಾವಾಣಿ ವಾರ್ತೆ
Published 12 ಮೇ 2021, 17:13 IST
Last Updated 12 ಮೇ 2021, 17:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಈ ವರ್ಷದ (2020–2021) ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಆಗಸ್ಟ್‌ 28 ಮತ್ತು 29ಕ್ಕೆ ಮುಂದೂಡಲಾಗಿದೆ. ಕನ್ನಡ ಭಾಷಾ ಪರೀಕ್ಷೆ 30ಕ್ಕೆ ನಡೆಯಲಿದೆ.

‘ಕೋವಿಡ್‌ ಕಾರಣಕ್ಕೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಿದ ಕಾರಣ ಸಿಇಟಿ ಸಹಾ ಮುಂದೂಡಲಾಗಿದೆ. ಶೀಘ್ರವೇ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಮೊದಲು ಪ್ರಕಟಿಸಿದ್ದ ವೇಳಾಪಟ್ಟಿಯಂತೆ ಜುಲೈ 7 ಮತ್ತು 8ರಂದು ಸಿಇಟಿ, 9ರಂದು ಕನ್ನಡ ಪರೀಕ್ಷೆ ನಡೆಯಬೇಕಾಗಿತ್ತು. ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ಭೇಟಿ ನೀಡಬಹುದು.

ADVERTISEMENT

ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮ, ಫಾರ್ಮ-ಡಿ ಮತ್ತಿತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಸಿಇಟಿ ನಡೆಸಲಿದೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಬರೆಯಲಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.