
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ಪ್ರಕಟಿಸಿದೆ.
ಪರೀಕ್ಷೆ ನಡೆದು 13 ದಿನಗಳಲ್ಲೇ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12 ಗಂಟೆ ಒಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ನ.2ರಂದು 11 ಜಿಲ್ಲೆಗಳಲ್ಲಿ ನಡೆಸಲಾಗಿತ್ತು. 33 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.