
ಜಯಮಾಲಾ
ಬೆಂಗಳೂರು: ರಾಜ್ಯ ಸರ್ಕಾರ ಚಲನಚಿತ್ರ ಕ್ಷೇತ್ರದಲ್ಲಿನ 2020ನೇ ಹಾಗೂ 2021ನೇ ಸಾಲಿನ ಜೀವಮಾನದ ಸಾಧನೆ ಪ್ರಶಸ್ತಿಗಳನ್ನು ಗುರುವಾರ ಘೋಷಿಸಿದೆ.
2020ನೇ ಸಾಲಿನ ‘ಡಾ. ರಾಜಕುಮಾರ್ ಪ್ರಶಸ್ತಿ’ಗೆ ನಟಿ ಜಯಮಾಲಾ, ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ನಿರ್ದೇಶಕ ಎಂ.ಎಸ್. ಸತ್ಯು, ‘ಡಾ.ವಿಷ್ಣುವರ್ಧನ್ ಪ್ರಶಸ್ತಿ’ಗೆ ಸ್ಥಿರ ಛಾಯಾಗ್ರಾಹಕ ‘ಪ್ರಗತಿ’ ಅಶ್ವತ್ಥನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.
2021ನೇ ಸಾಲಿನ ‘ಡಾ. ರಾಜಕುಮಾರ್ ಪ್ರಶಸ್ತಿ’ಗೆ ನಿರ್ಮಾಪಕ ಸಾ.ರಾ. ಗೋವಿಂದು, ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ನಿರ್ದೇಶಕ ಕೆ. ಶಿವರುದ್ರಯ್ಯ, ‘ಡಾ.ವಿಷ್ಣುವರ್ಧನ್ ಪ್ರಶಸ್ತಿ’ಗೆ ನಟ–ನಿರ್ಮಾಪಕ ಎಂ.ಕೆ. ಸುಂದರ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೂರೂ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು ಮತ್ತು 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.