ADVERTISEMENT

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2022, 7:04 IST
Last Updated 13 ಜನವರಿ 2022, 7:04 IST
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ   

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅವರಿಗೆ ಕೋವಿಡ್ ದೃಢಪಟ್ಟಿದೆ.

ಅವರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಕುರಿತು ಮಾಜಿ ಕೇಂದ್ರ ಸಚಿವರೂ ಆಗಿರುವ ವೀರಪ್ಪ ಮೊಯ್ಲಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

'ಇಂದು (ಬುಧವಾರ) ಸಂಜೆ ನನಗೆ ಕೋವಿಡ್ ದೃಢಪಟ್ಟಿದೆ. ನನಗೆ ಕೆಮ್ಮು ಹಾಗೂ ಜ್ವರದ ಲಕ್ಷಣಗಳಿದ್ದು, ಸಂಪೂರ್ಣವಾಗಿ ಲಸಿಕೆ ಪಡೆದಿದ್ದರಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿಲ್ಲ' ಎಂದು ಹೇಳಿದ್ದಾರೆ.

ನಾನು ಈಗ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ. ಇತ್ತೀಚಿಗೆತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ನಡೆಸುವಂತೆಯೂ ವಿನಂತಿ ಮಾಡಿದ್ದಾರೆ.

82 ವರ್ಷದ ವೀರಪ್ಪ ಮೊಯ್ಲಿ ಅವರಿಗೆ ಜನ್ಮದಿನದಂದೇ (ಜ.12) ಕೊರೊನಾ ಸೋಂಕು ತಗುಲಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾವೇರಿ–ಅರ್ಕಾವತಿಯ ‘ಸಂಗಮ’ದಿಂದ ಭಾನುವಾರ ಆರಂಭಿಸಿದ 10 ದಿನಗಳ ಪಾದಯಾತ್ರೆಯಲ್ಲಿ ವೀರಪ್ಪ ಮೊಯ್ಲಿಭಾಗವಹಿಸಿದ್ದರು. ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.