ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ನಗರ ಪಾಲಿಕೆಗಳನ್ನು ರಚನೆ ಮಾಡಿ ಕರ್ನಾಟಕ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
5 ನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿ ಕರ್ನಾಟಕ ರಾಜ್ಯಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ತಿಳಿಸಿದೆ.
ಆಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್ ಪಾಸ್ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ. ಪಾಲಿಕೆಗಳ ರಚನೆ ಬಗ್ಗೆ ಆಕ್ಷೇಪಣೆ ಇದ್ದರೇ ಸಾರ್ವಜನಿಕರು ಸಲಹೆ ನೀಡುವಂತೆ ಸರ್ಕಾರ ತಿಳಿಸಿದೆ.
5 ಮಹಾನಗರ ಪಾಲಿಕೆಗಳು ಯಾವುವು?
1) ಬೆಂಗಳೂರು ದಕ್ಷಿಣ ನಗರ ಪಾಲಿಕೆ
2) ಬೆಂಗಳೂರು ಉತ್ತರ ನಗರ ಪಾಲಿಕೆ
3) ಬೆಂಗಳೂರು ಕೇಂದ್ರ ನಗರ ಪಾಲಿಕೆ
4) ಬೆಂಗಳೂರು ಪಶ್ಚಿಮ ನಗರ ಪಾಲಿಕೆ
5) ಬೆಂಗಳೂರು ಪೂರ್ವ ನಗರ ಪಾಲಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.