
ಪ್ರಜಾವಾಣಿ ವಾರ್ತೆ
ಕಾಸರಗೋಡು: ಬೆಳಗಾವಿಯಲ್ಲಿ ಏ.16 ಮತ್ತು 17ರಂದು ನಡೆಯಲಿರುವ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನದ ಅಧ್ಯಕ್ಷರಾಗಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.
ಇವರು ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದ ತೆಕ್ಕೆಕೆರೆ ನಿವಾಸಿ.ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.
ಬಿಎಸ್‌ಎನ್‌ಎಲ್ ನಿವೃತ್ತ ಸಿಬ್ಬಂದಿಯಾದ ಇವರು, 1984ರಿಂದ ಗಮಕಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.