ADVERTISEMENT

ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು: 16ನೇ ಹಣಕಾಸು ಆಯೋಗ ಶಿಫಾರಸು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 10:27 IST
Last Updated 1 ಫೆಬ್ರುವರಿ 2026, 10:27 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

ಚಿತ್ರ: ಸಂಸದ್ ಟಿವಿ

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ 2026–27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ಹಂಚಿಕೆ ಮಾಡಿದೆ.

ADVERTISEMENT

16ನೇ ಹಣಕಾಸು ಆಯೋಗದ ಅನ್ವಯ ಕರ್ನಾಟಕಕ್ಕೆ ಶೇ 4.13 ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. 15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು.

ರಾಜ್ಯ ಸರ್ಕಾರವು 14ನೇ ಹಣಕಾಸು ಆಯೋಗದಲ್ಲಿ ನೀಡಿದಷ್ಟೇ, ಅಂದರೆ ಶೇ 4.71 ಹಂಚಿಕೆ ಮಾಡುವಂತೆ ಮನವಿ ಮಾಡಿತ್ತು. ಆದರೆ ಕೇಂದ್ರವು ರಾಜ್ಯಕ್ಕೆ 2026–27ನೇ ಸಾಲಿನಲ್ಲಿ ₹63,049 ಕೋಟಿ (ಶೇ. 4.13) ತೆರಿಗೆ ಪಾಲು ಹಂಚಿಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.