ADVERTISEMENT

ಲಾಕ್‌ಡೌನ್‌ ಇದ್ದರೂ ಭಾನುವಾರ ವಿವಾಹಗಳಿಗೆ ಅನುಮತಿ ನೀಡಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 21 ಮೇ 2020, 11:58 IST
Last Updated 21 ಮೇ 2020, 11:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಇದ್ದರೂ ಮದುವೆ ಸಮಾರಂಭಗಳಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಅನುಮತಿ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಮದುವೆಯಲ್ಲಿ ಗರಿಷ್ಠ ಅತಿಥಿಗಳ ಸಂಖ್ಯೆ 50 ಇರಬೇಕು. ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಅನುಸರಿಸಿ ಸರಳ ವಿವಾಹ ನಡೆಸಬಹುದು. ಇದಲ್ಲದೆ, ಭಾನುವಾರಗಳಂದು ಅತ್ಯವಶ್ಯಕ ಚಟುವಟಿಕೆಗಳಿಗೂ ಅವಕಾಶ ನೀಡಬಹುದು ಎಂದೂ ಹೇಳಿದೆ.

ಉಳಿದಂತೆ ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಎಲ್ಲ ರೀತಿಯ ಚಟುವಟಿಕೆಗಳು, ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. 14ರ ನೇ ಸೆಕ್ಷನ್‌ ಅಡಿ ನಿಷೇಧಾಜ್ಞೆ ಇರುತ್ತದೆ ಎಂದೂ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.