ADVERTISEMENT

ರಾಜ್ಯದಲ್ಲಿ 5 ದಿನ ಗಣೇಶೋತ್ಸವಕ್ಕೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 19:54 IST
Last Updated 5 ಸೆಪ್ಟೆಂಬರ್ 2021, 19:54 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಹಲವು ಷರತ್ತುಗಳೊಂದಿಗೆ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೆರವಣಿಗೆಗೆ ನಿಷೇಧ ಹೇರಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿ
ಸಿದಂತೆ ಭಾನುವಾರ ನಡೆದ ಉನ್ನತ
ಮಟ್ಟದ ಸಭೆಯಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಆರ್‌. ಅಶೋಕ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಸಮಿತಿಯ ಸದಸ್ಯರು ಸಭೆಯಲ್ಲಿದ್ದರು. ಎಲ್ಲರ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿ, ಗರಿಷ್ಠ ಐದು ದಿನಗಳವರೆಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ತೀರ್ಮಾನ ಕೈಗೊಂಡರು.

ಕೋವಿಡ್‌ ಮೂರನೇ ಅಲೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂಬ ತಜ್ಞರ ಎಚ್ಚರಿಕೆಯಿಂ
ದಾಗಿ ಗಣೇಶೋತ್ಸವ ಕುರಿತು ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿರಲಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವರು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಒತ್ತಡ ಹೇರಲಾರಂಭಿಸಿದ್ದರು. ಕೆಲ ಹಿಂದೂ ಪರ ಸಂಘಟನೆಗಳು ಈ ಬೇಡಿಕೆ ಇಟ್ಟಿದ್ದವು.

ADVERTISEMENT

ಲಸಿಕೆ ಕಡ್ಡಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆ
ಯ ಸಂಘಟಕರು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಪಡೆದಿರಬೇಕು. ‘ಕೋವಿಡ್‌ ನೆಗೆಟಿವ್‌’ ಪ್ರಮಾಣಪತ್ರ ಹೊಂದಿರುವುದೂ ಕಡ್ಡಾಯ ಎಂದು ಕಂದಾಯ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಗಣೇಶೋತ್ಸವ ಆಚರಣೆಯ ಸ್ಥಳಗಳಲ್ಲಿ ಸ್ಥಳೀಯವಾಗಿ ಕೋವಿಡ್‌ ಲಸಿಕೆ ಹಾಕುವ ಕಾರ್ಯಕ್ರಮ ಆಯೋ
ಜಿಸಬೇಕು. ದೇವಸ್ಥಾನವೂ ಸೇರಿ
ದಂತೆ ಗಣೇಶೋತ್ಸವ ಆಚರಿಸುವ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಸ್ಯಾನಿಟೈಸೇಷನ್‌ ಮಾಡಬೇಕು. ಸ್ಯಾನಿ
ಟೈಸರ್‌ ಮತ್ತು ದೇಹದ ಉಷ್ಣಾಂಶ ತಪಾಸಣೆಗೆ ವ್ಯವಸ್ಥೆ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ.

ಪ್ರಮುಖ ಷರತ್ತುಗಳು

l ಗರಿಷ್ಠ ನಾಲ್ಕು ಅಡಿ ಎತ್ತರದ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಮಾತ್ರ ಅನುಮತಿ

l ಒಮ್ಮೆಗೆ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ

l ದರ್ಶನದ ವೇಳೆ ಆರು ಅಡಿ ಅಂತರ ಕಾಯ್ದುಕೊಳ್ಳಲು ಗುರುತುಗಳನ್ನು ಹಾಕಬೇಕು

l ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲರೂ ಮಾಸ್ಕ್‌ ಧರಿಸುವುದು ಕಡ್ಡಾಯ

l ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಡಿ.ಜೆ ಸಂಗೀತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ

l ಗಣೇಶ ವಿಗ್ರಹಗಳನ್ನು ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆ ನಡೆಸುವಂತಿಲ್ಲ

l ಮನೆಗಳಲ್ಲಿ ಪ್ರತಿಷ್ಠಾಪಿಸಿದ ವಿಗ್ರಹ, ಮೂರ್ತಿಗಳನ್ನು ಮನೆಗಳಲ್ಲೇ ವಿಸರ್ಜಿಸಬೇಕು

l ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ವಿಗ್ರಹಗಳನ್ನು ಹೊಂಡ, ‘ಮೊಬೈಲ್‌ ಟ್ಯಾಂಕ್‌’ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು

l ವಾಹನ ಮತ್ತು ಜನರ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ

l ಶಾಂತಿ ಮತ್ತು ಸೌಹಾರ್ದಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಉಂಟುಮಾಡಬಾರದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.