ವಿಧಾನಸೌಧ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದವರಿಗೆ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಯ 2023ನೇ ಸಾಲಿನ ಪಟ್ಟಿಯನ್ನು ಸರ್ಕಾರ ಇಂದು (ಶನಿವಾರ) ಪ್ರಕಟಿಸಿದೆ.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗೆ ತಲಾ ಇಬ್ಬರನ್ನು ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆಯೇ 30 ಸಾಧಕರ ಹೆಸರುಗಳನ್ನು ಸರ್ಕಾರ ಪ್ರಕಟಿಸಿದೆ.
ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸರ್ಕಾರ ನೀಡುತ್ತಿದ್ದ ಪ್ರಶಸ್ತಿಯ ಮೊತ್ತವನ್ನು ತಲಾ ₹10 ಸಾವಿರದಿಂದ ₹25 ಸಾವಿರಕ್ಕೆ ಮತ್ತು ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ ₹25 ಸಾವಿರದಿಂದ ₹50 ಸಾವಿರಕ್ಕೆ ಪ್ರಶಸ್ತಿ ಮೊತ್ತ ಏರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.