
(ಸಾಂದರ್ಭಿಕ ಚಿತ್ರ)
ಕೇಂದ್ರ ಪುರಸ್ಕೃತ ಕಾರ್ಯಕ್ರಮದಡಿ ಸಮಗ್ರ ಶಿಕ್ಷಣ ಕರ್ನಾಟಕ ದಡಿ ರಾಜ್ಯದ 854 ಸರ್ಕಾರಿ ಪ್ರೌಢಶಾಲೆಗಳು ಹಾಗೂ ಕೆಜಿಬಿವಿ ಶಾಲೆಗಳಲ್ಲಿ ₹44.29 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕಂಪ್ಯೂಟರ್ ಲ್ಯಾಬ್‌ಗಳ ಮೂಲಕ ಸರ್ಕಾರಿ ಶಾಲೆಗಳಲ್ಲಿ 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಡಿಜಿಟಲ್ ಸಾಕ್ಷರತೆಯನ್ನು ಖಚಿತಪಡಿಸುವುದು
ತರಗತಿ ಪಾಠ ಬೋಧನೆಯಲ್ಲಿ ಪೂರಕ ಕಲಿಕೋಪಕರಣವಾಗಿ ಐಸಿಟಿ ಉಪಕರಣಗಳ ಬಳಕೆ ಉತ್ತೇಜಿಸುವುದು
ಇ–ಕಂಟೆಂಟ್ ಮತ್ತು ತಂತ್ರಜ್ಞಾನ ಬಳಸಿ ಬೋಧನೆ–ಕಲಿಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆಯ ಅನುಭವದ ಮೂಲಕ ಒದಗಿಸಿ ಬೋಧನಾ ಗುಣಮಟ್ಟವನ್ನು ಹೆಚ್ಚಿಸುವುದು
ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವುದು. ಶಿಕ್ಷಕರಲ್ಲಿ ತಂತ್ರಜ್ಞಾನ ಆಧಾರಿತ ಬೋಧನಾ ಸಾಮರ್ಥ್ಯವನ್ನು ಬೆಳೆಸುವುದು ಹಾಗೂ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಮೂಲಕ ಬೋಧಿಸುವುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.