ವಿಧಾನಸೌಧ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ 2.25ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದ್ಯ, ಮೂಲವೇತನದ ಶೇ 8.50ರಷ್ಟು ತುಟ್ಟಿ ಭತ್ಯೆ ಇದ್ದು, ಆರ್ಥಿಕ ಇಲಾಖೆಯ ಆದೇಶದ ಬಳಿಕ ಅದನ್ನು ಶೇ 10.75ಕ್ಕೆ ಹೆಚ್ಚಿಸಲಾಗಿದೆ.
ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ಇದು ಅನ್ವಯವಾಗಲಿದೆ.
ಏಳನೇ ವೇತನ ಆಯೋಗದ ಶಿಫಾರಸಿನಂತೆ ಇದೇ ಆ.1ರಿಂದ ಪರಿಷ್ಕೃತ ವೇತನ ಶ್ರೇಣಿ ಜಾರಿ ಗೊಳಿಸಲಾಗಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡಲಾಗಿತ್ತು. ಈಗ ಆಗಸ್ಟ್‌ನಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.