ADVERTISEMENT

ಶುಕ್ರವಾರ ಲಸಿಕಾ ಮೇಳ: 34 ಲಕ್ಷ ಡೋಸ್ ನೀಡುವ ಗುರಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 19:14 IST
Last Updated 16 ಸೆಪ್ಟೆಂಬರ್ 2021, 19:14 IST
   

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಲಸಿಕಾ ಮೇಳವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದು, ಒಂದೇ ದಿನ 34 ಲಕ್ಷ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿಯೂಉಚಿತವಾಗಿ ಲಸಿಕೆ ಒದಗಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಲಸಿಕೆ ವಿತರಿಸಲು ಯೋಜನೆ ರೂಪಿಸಲಾಗಿದೆ. 12,700 ಸರ್ಕಾರಿ ಕೇಂದ್ರಗಳು ಹಾಗೂ 300 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ.

‘ದೇಶದಲ್ಲಿ ಉತ್ತರ‍ಪ್ರದೇಶದ ಬಳಿಕ ಅತೀ ಹೆಚ್ಚು ಡೋಸ್‌ ನೀಡಿದ ರಾಜ್ಯ ಕರ್ನಾಟಕ. ಆಗಸ್ಟ್ ತಿಂಗಳಲ್ಲಿ 1.10 ಕೋಟಿ ಡೋಸ್‌ಗಳು ಲಸಿಕೆಯನ್ನು ನೀಡಲಾಗಿದೆ. ನವೆಂಬರ್ ಅಂತ್ಯಕ್ಕೆ ರಾಜ್ಯದ‌ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಾರದಲ್ಲಿ ಬುಧವಾರ 15 ಲಕ್ಷ ಡೋಸ್‌ಗಳು ಹಾಗೂ ಉಳಿದ ದಿನ 5 ಲಕ್ಷ ಡೋಸ್‌ಗಳು ನೀಡುವ ಗುರಿಯಿದ್ದು, ಅಗತ್ಯತೆಗೆ ಅನುಗುಣವಾಗಿ ಲಸಿಕೆ ಪೂರೈಸಲು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಆರೋಗ್ಯ ಇಲಾಖೆ
ತಿಳಿಸಿದೆ.

ADVERTISEMENT

ರಾಜ್ಯದಲ್ಲಿ ಈವರೆಗೆ ಲಸಿಕೆಯ 4.84 ಕೋಟಿಗೂ ಅಧಿಕ ಡೋಸ್‌ಗಳನ್ನು ವಿತರಿಸಲಾಗಿದೆ. 3.56 ಕೋಟಿ ಮಂದಿ ಈವರೆಗೆ ಮೊದಲ ಡೋಸ್ ಹಾಗೂ 1.28 ಕೋಟಿ ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.