ADVERTISEMENT

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2023, 14:16 IST
Last Updated 30 ಡಿಸೆಂಬರ್ 2023, 14:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ. 

ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಬೌದ್ಧಿಕ ಪ್ರಗತಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು, ಮೇಲುಸ್ತುವಾರಿ ನೋಡಿಕೊಳ್ಳಲು ಕರ್ನಾಟಕ ಆಡಳಿತ ಸೇವೆಯ (ಕೆಎಎಸ್‌) ಅಧಿಕಾರಿಗಳನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳಾನ್ನಾಗಿ ನಿಯೋಜನೆ ಮಾಡಲಾಗಿದೆ.

ADVERTISEMENT

ಗ್ಯಾರಂಟಿ ಯೋಜನೆಗಳ ಪರಿಶೀಲನೆ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡುವುದು, ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶ್ರಮಿಸುವುದು. ಕುಂದು–ಕೊರತೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಮಕ್ಕಳಿಗೆ ನೀಡುವ ಪೌಷ್ಟಿಕಾಂಶ ವಿತರಣೆಯ ನಿರ್ವಹಣೆ ಮಾಡುವುದು, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಜಲಮೂಲಗಳ ಜೀರ್ಣೋದ್ಧಾರ, ಬಿತ್ತನೆಬೀಜ, ಗೊಬ್ಬರ ವಿತರಣೆ, ಉದ್ಯೋಗ ಖಾತ್ರಿ ಕಾಮಗಾರಿ, ಪಿಂಚಣಿ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸುವುದು, ದೌರ್ಜನ್ಯ ಪ್ರಕರಣಗಳನ್ನು ತಡೆಯುವುದೂ ಸೇರಿದಂತೆ 13 ವಿಚಾರಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ನಿಯೋಜನೆಗೊಂಡ ತಾಲ್ಲೂಕಿಗೆ ತಿಂಗಳಿಗೆ ಕನಿಷ್ಠ ಎರಡು ಬಾರಿ ಭೇಟಿ ನೀಡಬೇಕು. ಪರಿಶೀಲನಾ ವರದಿಯನ್ನು ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.