
ಬೆಂಗಳೂರು: ‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ ₹50ರಂತೆ ಆರ್ಥಿಕ ನೆರವು ನೀಡಲು ₹300 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನ.8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ₹100 ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿತ್ತು. ಈ ಮೊತ್ತದಲ್ಲಿ ತಲಾ ₹50ರಂತೆ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ಬಿಡುಗಡೆ ಮಾಡಿದೆ’ ಎಂದು ಸಚಿವರು ಹೇಳಿದ್ದಾರೆ.
‘ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಕಬ್ಬು ಬೆಳೆಗಾರರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿ ಟನ್‌ಗೆ ₹50 ರಂತೆ ಜಮಾ ಮಾಡಲು ಜಿಲ್ಲಾಧಿಕಾರಿ ಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಕಬ್ಬು ನುರಿಸುವಿಕೆ ಮಾರ್ಚ್ ಮೊದಲ ವಾರದ ವೇಳೆಗೆ ಅಂತ್ಯವಾಗಲಿದ್ದು, 600 ಲಕ್ಷ ಟನ್ ನುರಿಸುವ ಅಂದಾಜು ಆಧರಿಸಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆಶಿವಾನಂದ ಪಾಟೀಲ,ಕಬ್ಬು ಅಭಿವೃದ್ಧಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.