ADVERTISEMENT

ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ₹6 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 18:43 IST
Last Updated 14 ಜನವರಿ 2026, 18:43 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆ ಅಡಿ ₹6 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಶಾಲೆಯ ವಿದ್ಯಾರ್ಥಿಗಳ ದಾಖಲಾತಿ ಖಚಿತಪಡಿಸಿಕೊಂಡು ಇಲಾಖೆಯ ಆಯುಕ್ತರು ಅಗತ್ಯ ಅನುದಾನ ವಿತರಣೆ ಮಾಡಬೇಕು. ಪ್ರತಿ ವಿದ್ಯಾರ್ಥಿಗೂ ಒಂದು ಜತೆ ಶೂ ಮತ್ತು ಎರಡು ಜತೆ ಸಾಕ್ಸ್‌ ನೀಡಬೇಕು. ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಮೂವರು ಸದಸ್ಯರು, ಮುಖ್ಯ ಶಿಕ್ಷಕರ ಸಮಿತಿ ಮೂರು ತಿಂಗಳ ಒಳಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. 

ADVERTISEMENT

1ರಿಂದ 5ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ₹ 265, 6ರಿಂದ 8 ₹ 295, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ₹325 ನಿಗದಿ ಮಾಡಲಾಗಿದೆ. ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸಮಿತಿ ರಚಿಸಬೇಕು. ಹಿಂದಿನ ಅವಧಿಯಲ್ಲಿ ಕಳಪೆ ಗಣಮಟ್ಟದ ಶೂ ವಿತರಿಸಿದ ದೂರುಗಳು ಇದ್ದರೆ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಉಪ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.