ರಾಜ್ಯಪಾಲ ಥಾವರ ಚಂದ್ ಗೆಹಲೋತ್
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕ್ವಾರಂಟೈನ್‌ನಲ್ಲಿರುವ ಗೆಹಲೋತ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಪ್ರಭು ಶಂಕರ್ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.