ADVERTISEMENT

ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಮರು ಪರೀಕ್ಷೆ ನಡೆಸಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 6:50 IST
Last Updated 29 ಏಪ್ರಿಲ್ 2022, 6:50 IST
   

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಕುರಿತಂತೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದ್ದು, ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಾಗಿದೆ.

ಈ ಮಧ್ಯೆ, 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಡಿಜಿ ಪ್ರವೀಣ್ ಸೂದ್,ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸಭೆ ನಡೆಸುತ್ತಿದ್ದಾರೆ.

ADVERTISEMENT

ಸಭೆಯ ಬಳಿಕ ಮರು ಪರೀಕ್ಷೆಯ ಬಗ್ಗೆ ಘೋಷಣೆ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.