ADVERTISEMENT

ಮುಂದಿನ ಬಜೆಟ್‌ ಮಂಡಿಸುವುದಾಗಿ ಸಿದ್ದರಾಮಯ್ಯ ಹೇಳಿರುವುದು ಸಂತೋಷ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 13:48 IST
Last Updated 25 ನವೆಂಬರ್ 2025, 13:48 IST

‘ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಪಕ್ಷದ ನಾಯಕರನ್ನು ನಾನೇನು ಕೇಳಿಲ್ಲ. ನಾವು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವವರು. ಪಕ್ಷವನ್ನು ಮುಜುಗರಕ್ಕೀಡು ಮಾಡುವುದಕ್ಕೆ ಅಥವಾ ದುರ್ಬಲಗೊಳಿಸುವುದಕ್ಕೆ ನಾನು ಇಷ್ಟಪಡುವುದಿಲ್ಲ. ಪಕ್ಷ ಮತ್ತು ಕಾರ್ಯಕರ್ತರಿದ್ದರೆ ನಾವೇ ಹೊರತು, ನಮ್ಮಿಂದ ಪಕ್ಷವಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕನಕಪುರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಹಿರಿಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಆಸ್ತಿ. ವಿರೋಧ ಪಕ್ಷದ ನಾಯಕರಾಗಿದ್ದ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಎರಡನೇ ಸಲ ಸಿ.ಎಂ ಆಗಿ ಎರಡೂವರೆ ವರ್ಷ ಮುಗಿಸಿರುವ ಅವರು, ಮುಂದಿನ ಬಜೆಟ್ ಸಹ ಮಂಡಿಸುವುದಾಗಿ ಹೇಳಿರುವುದು ಸಂತೋಷ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.