ADVERTISEMENT

ಜಾತಿವಾರು ಸಮೀಕ್ಷೆ | ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತಾಡಲ್ಲ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 4:50 IST
Last Updated 21 ಸೆಪ್ಟೆಂಬರ್ 2025, 4:50 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

ಬೆಂಗಳೂರು: ‘ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ದೆಹಲಿಗೆ ತೆರಳುವ ಮೊದಲು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ‌ ಅವರು ಮಾತನಾಡಿದರು,

ADVERTISEMENT

ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆಯನ್ನು ಮುಂದೂಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕೇಳಿದಾಗ ಅವರು, ‘ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ದೆಹಲಿ ಭೇಟಿಯ ಕುರಿತು ಕೇಳಿದಾಗ, ‘ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.