ADVERTISEMENT

ಪಿಡಿಒ ವರ್ಗಾವಣೆಗೆ ಕೌನ್ಸೆಲಿಂಗ್‌: ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 0:33 IST
Last Updated 7 ಮಾರ್ಚ್ 2025, 0:33 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ  ನಡೆಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪಿಡಿಒ (ಪಂಚಾಯಿತಿ ಅಭಿವೃದ್ಧಿ ಅಧಿಕಾರಿ), ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌–1,  ಕಾರ್ಯದರ್ಶಿ ಗ್ರೇಡ್‌–2,  ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಇದೇ ಮೊದಲ ಬಾರಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ತಿದ್ದುಪಡಿ ಕರಡನ್ನು 2024ರ ಜೂನ್‌ನಲ್ಲೇ ಪ್ರಕಟಿಸಲಾಗಿತ್ತು. ಆಕ್ಷೇಪಣೆ, ಕೋರ್ಟ್‌ ಪ್ರಕರಣಗಳ ಕಾರಣದಿಂದ ಪ್ರಕ್ರಿಯೆ ವಿಳಂಬವಾಗಿತ್ತು. 

ADVERTISEMENT

ಈಗ ಪ್ರಕ್ರಿಯೆ ಪುನರಾರಂಭಗೊಂಡಿದ್ದು, ಆಯಾ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಉಪ ಕಾರ್ಯಕ್ರದರ್ಶಿಗಳು ವೆಬ್‌ಸೈಟ್‌ನಲ್ಲಿರುವ ದತ್ತಾಂಶಗಳ ಪರಿಶೀಲನೆಯನ್ನು ಇದೇ ಮಾರ್ಚ್‌ 10ರ ಒಳಗೆ ಪೂರ್ಣಗೊಳಿಸಬೇಕು. 15ರ ಒಳಗೆ ಆಕ್ಷೇಪಣೆಗಳ ಪರಿಶೀಲನೆ ನಡೆಸಬೇಕು. 19ರ ಒಳಗೆ ಎಲ್ಲ ಸಿಇಒಗಳು ಅನುಮೋದನೆ ನೀಡಬೇಕು ಎಂದು ಸೂಚಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.