ADVERTISEMENT

ಮುಂದಿನ ವರ್ಷ ₹ 20 ಸಾವಿರ ಕೋಟಿ ಕೃಷಿ ಸಾಲ ಗುರಿ: ಬಿ.ಎಸ್‌.ಯಡಿಯೂರಪ್ಪ

ಸರ್ಕಾರಕ್ಕೆ ಒಂದು ವರ್ಷ: ‘ಸಹಕಾರದ ಪ್ರಗತಿ–2020’ ಕಿರುಹೊತ್ತಿಗೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 7:43 IST
Last Updated 26 ಜುಲೈ 2020, 7:43 IST
‘ಸಹಕಾರದ ಪ್ರಗತಿ–2020’ ಕಿರುಹೊತ್ತಿಗೆ ಬಿಡುಗಡೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ್ ಇದ್ದಾರೆ
‘ಸಹಕಾರದ ಪ್ರಗತಿ–2020’ ಕಿರುಹೊತ್ತಿಗೆ ಬಿಡುಗಡೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ್ ಇದ್ದಾರೆ   

ಬೆಂಗಳೂರು: ‘ಮುಂದಿನ ವರ್ಷದ 30 ಲಕ್ಷ ರೈತರಿಗೆ ₹ 20 ಸಾವಿರ ಕೋಟಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದ್ದು, ಅದಕ್ಕೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದರು.‌

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಹೊರತಂದ 'ಸಹಕಾರದ ಪ್ರಗತಿ – 2020' ಕಿರುಹೊತ್ತಿಗೆಯನ್ನು ತಮ್ಮ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಭಾನುವಾರ ಬಿಡುಗಡೆ ಮಾಡಿ ಮಾತನಾಡಿದರು.

‘ಪ್ರಸಕ್ತ ಸಾಲಿನಲ್ಲಿ ರೈತರಿಗೆ ₹ 14,500 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 8.50 ಲಕ್ಷ ರೈತರಿಗೆ ₹ 5,600 ಕೋಟಿ ಕೃಷಿ ಸಾಲ ವಿತರಿಸಲಾಗಿದೆ. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸಚಿವರಿಗೆ ಮುಖ್ಯಮಂತ್ರಿ ಹೇಳಿದರು.

ADVERTISEMENT

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.