
ಪ್ರಜಾವಾಣಿ ವಾರ್ತೆವರ್ಗಾವಣೆ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ಐಎಎಸ್ ಅಧಿಕಾರಿಗಳಾದ ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಎನ್.ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.