ಶಿಕ್ಷಣ ಇಲಾಖೆ
ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಎಕ್‌ಸ್ಟೆಪ್ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ‘ಕಲಿಕಾ ದೀಪ’ ಕಾರ್ಯಕ್ರಮದ ಭಾಗವಾದ ಯೋಜನೆಯನ್ನು ಕೊಪ್ಪಳ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಇತರೆ ಎಲ್ಲ ಶಾಲೆಗಳಲ್ಲೂ ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.
ಯೋಜನೆಯಿಂದ 1,44,062 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ₹1.38 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇಂಟರ್‌ನೆಟ್ ಶುಲ್ಕ, ಹೆಡ್ ಫೋನ್‌ಗಳ ಖರೀದಿ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲು ಅನುದಾನ ಬಳಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.