ಬೆಂಗಳೂರು: ಪಂಚ ಭಾಷಾ ನಟಿ ದಿವಂಗತ ಬಿ. ಸರೋಜಾದೇವಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಅವರ ಹೆಸರಿನಲ್ಲಿ ರಾಜ್ಯ ಸರ್ಕಾರವು ಈ ಸಾಲಿನಿಂದ ಜಾರಿಗೆ ಬರುವಂತೆ ‘ಅಭಿನಯ ಸರಸ್ವತಿ ಬಿ. ಸರೋಜಾ ದೇವಿ' ಪ್ರಶಸ್ತಿ ಸ್ಥಾಪಿಸಿದೆ.
ಈ ಪ್ರಶಸ್ತಿಯು ₹ 1 ಲಕ್ಷ ಮತ್ತು 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ- 2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿಯ ನಿಯಮದಂತೆ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆದೇಶದಲ್ಲಿ ತಿಳಿಸಿದೆ.
ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುವುದು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ಬಿ. ಸರೋಜಾದೇವಿ ಅವರ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರವು ಇತ್ತೀಚೆಗೆ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.