ADVERTISEMENT

ಸಿಎಂ, ಡಿಸಿಎಂ ಉದ್ಧಟತನದ ಹೇಳಿಕೆ ರಾಜ್ಯಕ್ಕೆ ಮಾರಕ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2023, 23:30 IST
Last Updated 5 ನವೆಂಬರ್ 2023, 23:30 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ಜತೆ  ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಆದರೆ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಉದ್ಧಟತನದ ಹೇಳಿಕೆಗಳು ರಾಜ್ಯಕ್ಕೆ ಮಾರಕ ಆಗುತ್ತಿವೆ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವೃಥಾ ರಾಜಕೀಯ ಮಾಡುವುದನ್ನು ಬಿಟ್ಟು, ರಾಜ್ಯದ ಜನರ ಒಳಿತು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು ಎಂದು ಅವರು ಸಲಹೆ ನೀಡಿದರು.

ಬರದ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಕೇಂದ್ರ ಸರ್ಕಾರಕ್ಕೆ ಸ್ಪಂದಿಸಿ, ಅಗತ್ಯ ಮಾಹಿತಿ ನೀಡಬೇಕು. ಪ್ರಧಾನಿಯವರ ಜತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಿ. ಕೇಂದ್ರ ಸರ್ಕಾರ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಗಳ ಆಕಾಂಕ್ಷಿಗಳು ದಿನೇ ದಿನೇ
ಹೆಚ್ಚುತ್ತಿದ್ದಾರೆ. ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಆದರೆ, ಇನ್ನೂ 8ರಿಂದ 10 ಮಂದಿ ಮುಖ್ಯಮಂತ್ರಿ ಆಗಲು ಸರದಿಯಲ್ಲಿ ನಿಂತಿದ್ದಾರೆ. ಡಿಸಿಎಂ ಆಗಲು 15ರಿಂದ 20 ಶಾಸಕರು ಕಾದು ಕುಳಿತ್ತಿದ್ದಾರೆ. ಈ ಪರಿಸ್ಥಿತಿ ದೇಶದ ಯಾವುದೇ ರಾಜ್ಯದಲ್ಲೂ ನೋಡಲು ಸಿಗುವುದಿಲ್ಲ ಎಂದು ಅವರು ಹೇಳಿದರು. ಜಾತಿ ಗಣತಿ ವಿಚಾರದಲ್ಲಿ ಮುಖ್ಯಮಂತ್ರಿಯವರು ಎಲ್ಲ ವರ್ಗಗಳ ಹಿತದೃಷ್ಟಿಯಿಂದ ಚಿಂತಿಸಬೇಕು. ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನತೆ ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ADVERTISEMENT

ವಿಜಯೇಂದ್ರ ಅವರ ಜನ್ಮದಿನದ ಕಾರಣ ನೂರಾರು ಅಭಿಮಾನಿಗಳು ಅವರ ಮನೆ ಮುಂದೆ ಸೇರಿ ಬಿಜೆಪಿಯ ಮುಂದಿನ ಅಧ್ಯಕ್ಷರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.