ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ
–ಪ್ರಜಾವಾಣಿ ಚಿತ್ರ
ಬೆಂಗಳೂರು: 'ದೇವರಾಜು ಅರಸು ಅವರು ಏಳು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ' ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಏಳು ವರ್ಷಗಳಲ್ಲ ಸಿದ್ದರಾಮಯ್ಯ ಹತ್ತು ವರ್ಷ ಇರುತ್ತಾರೆ. ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಇರ್ತಾರೆ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ' ಎಂದರು
'ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ. ಮುಂದಿನ ಬಾರಿಯ ನಾವು ಅಧಿಕಾರಕ್ಕೆ ಬರುತ್ತೇವೆ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.